
ಬೆಂಗಳೂರು: ಎಂ.ಎಸ್ ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆಯಲ್ಲಿ ಓರ್ವ ರೋಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆ ನಿರ್ಲಕ್ಷ್ಯದಿಂದಲೇ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಕಿ ಅವಘಡದಲ್ಲಿ ರೋಗಿ ಘಣೀಕರ್ (34) ಸಾವನ್ನಪ್ಪಿದವರು. ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಆಗಿಲ್ಲ. ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನು, ಸಾವನ್ನಪ್ಪಿದ ಫಣೀಕರ್ ಹೆಚ್1ಎನ್1 ಇಂದ ಬಳಲುತ್ತಿದ್ದು ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ರೋಗಿ ಗುಣಮುಖರಾಗಿದ್ದಾರೆ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದರು. ಅಗ್ನಿ ಅವಘಡಕ್ಕೂ ಮುನ್ನ ಕುಟುಂಬಸ್ಥರ ಜೊತೆ ರೋಗಿ ಮಾತನಾಡಿದ್ದ. ಆದರೆ ಆಸ್ಪತ್ರೆಯ ಸಿಸಿಯು ಯೂನಿಟ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದಾದ ಮೇಲೆ ಸಂಜೆ 4 ಗಂಟೆವರೆಗೂ ಕುಟುಂಬಸ್ಥರನ್ನ ನೋಡಲು ಸಿಬ್ಬಂದಿ ಬಿಟ್ಟಿಲ್ಲ. ರೋಗಿ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
Poll (Public Option)

Post a comment
Log in to write reviews