
ಬೆಳಗಾವಿ: ಕಾಗವಾಡದ ಶಿರಗುಪ್ಪಿ ಗ್ರಾಮದ ಅಂಗಡಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ 75 ಲಕ್ಷದಷ್ಟು ವಸ್ತುಗಳು ನಷ್ಟ ಉಂಟಾಗಿದ್ದು ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಶಿವ ಶಕ್ತಿ ವೀಲ್ಸ್ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 4 ಕಾರ್‌ಗಳು, ಟಯರ್ ಸೇರಿದಂತೆ ಸುಮಾರು 75 ಲಕ್ಷದಷ್ಟು ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಅಗ್ನಿ ನಂದಿಸಿದ್ದಾರೆ. ಬೆಂಕಿ ನಂದಿಸಿದ್ದರಿಂದ ಪಕ್ಕದ ಅಂಗಡಿ ಮುಂಗ್ಗಟ್ಟುಗಳಿಗೆ ಯಾವುದೇ ಹಾನಿಯಾಗಿಲ್ಲ. ಈ ಘಟನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಗಿದೆ ಎಂಬುದು ತಿಳಿದು ಬಂದಿದೆ.
Poll (Public Option)

Post a comment
Log in to write reviews