
ಮುಂಬೈ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗ್ಗೆ ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.
Poll (Public Option)

Post a comment
Log in to write reviews