ಆಂಧ್ರಪ್ರದೇಶ: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಲವೊಂದು ಸುತ್ತೋಲೆಗಳನ್ನು ಹೊರಡಿಸಿದ್ದು, ಇದೀಗ ನಂದಿನಿ ಬ್ರಾಂಡ್ ಹೊರತುಪಡಿಸಿ ಉಳಿದೆಲ್ಲ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಸರ್ಕಾರ ತೀರ್ಮಾನಿಸಿದೆ.
ಇನ್ನೂ ಈ ಬಗ್ಗೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಎಲ್ಲಡೆ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯಾ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ, ಇನ್ನೂ ದೇವಸ್ಥಾನದಲ್ಲಿ ಕೊಡುವ ಪ್ರಸಾದಗಳ ಮಾದರಿ ಪರಿಶೀಲನೆ ಮಾಡದೆ ನೇರವಾಗಿ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
Post a comment
Log in to write reviews