
ತಮಿಳುನಾಡು: ಪಟಾಕಿ ತಯಾರಿಕಾ ಘಟಕ ಆಕಸ್ಮಿಕ ಸ್ಫೋಟಗೊಂಡು ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಕಾರ್ಖಾನೆಯಲ್ಲಿ ರಾಸಾಯನಿಕಗಳನ್ನು ಬೆರೆಸುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ದುರಂತಕ್ಕೆ ನಿಖರ ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಒಂದು ಭಾಗದ ಗೋಡೆ ಕುಸಿದು ಬಿದ್ದಿದ್ದು, ಘಟನೆಯಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟ ಸಂಭವಿಸಿದ ಮಾಹಿತಿ ತಿಳಿಯುತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು ಜೊತೆಗೆ ಸಂತ್ರಸ್ತರ ಕುಟುಂಬಗಳಿಗೆ 3 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Poll (Public Option)

Post a comment
Log in to write reviews