
ಶಿವಮೊಗ್ಗ : ರಾಜ್ಯದಲ್ಲಿ ಕಾಣಿಸಿಕೊಂಡ ಡೆಂಗ್ಯೂ ಮಹಾಮಾರಿಗೆ ಮೊದಲ ಬಲಿಯಾಗಿದೆ. ಕಳೆದ ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ನಾಗರಾಜ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ ಗೆ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಗುರುವಾರ ಜೂನ್ 13) ಪ್ಲೇಟ್ ಲೆಟ್ ಪ್ರಮಾಣ 26,000 ಗೂ ಕಡಿಮೆ ಕುಸಿದಿದ್ದ ಪರಿಣಾಮವಾಗಿ ನಿಧನರಾಗಿದ್ದಾರೆ ಎಂದು ಸಾಗರ ತಾಲೂಕು ವೈದ್ಯಾಧಿಕಾರಿ ಡಾ.ಪರಪ್ಪ ತಿಳಿಸಿದ್ದಾರೆ.
Poll (Public Option)

Post a comment
Log in to write reviews