
ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಕೊಚ್ಚಿಹೋಗಿ 5 ಮಂದಿ ಮೃತ 2 ಮಂದಿ ಸಾವಿನ ಅಂಚಿನಿಂದ ಪಾರಾಗಿರುವ ಘಟನೆ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.
ಮೃತ ಪಟ್ಟವರು ಪುಣೆ ಮೂಲದ (36) ಶಾಹಿಸ್ತಾ ಅನ್ಸಾರಿ, (13) ಅಮಿಮಾ ಅನ್ಸಾರಿ, (8) ಉಮೇರಾ ಅನ್ಸಾರಿ, (4) ಅದ್ನಾನ್ ಅನ್ಸಾರಿ ಮತ್ತು (9) ಮರಿಯಾ ಸೈಯದ್ ಎಂದು ತಿಳಿದು ಬಂದಿದೆ.
ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀರಿನ ಲೋನಾವಾಲಾ ಜಲಪಾತ ಬಳಿ ಬಂದಿದ್ದಾರೆ. ಈ ವೇಳೆ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ. ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ಹಿನ್ನೀರಿನ ಮಟ್ಟ ಏರಿಕೆಯಾಗಿದೆ. ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಇಬ್ಬರು ಈಜಿ ದಡ ಸೇರಿ ಸಾವಿನ ಅಂಚಿನಿಂದ ಪಾರಾಗಿದ್ದು, ಐವರು ನೀರು ಪಾಲಾಗಿದ್ದಾರೆ.
Poll (Public Option)

Post a comment
Log in to write reviews