
ಮುಂಬೈ: ವಾಸವಿದ್ದ ಮಳೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮುಂಬೈನ ಚೆಂಬೂರಿನಲ್ಲಿ ನಡೆದಿದೆ. ಇನ್ನೂ ಬೆಂಕಿ ಅವಘಡದಲ್ಲಿ 5 ಜನರು ಸಜೀವ ದಹನವಾಗಿರುವುದಾಗಿ ತಿಳಿದು ಬಂದಿದೆ. ಚೆಂಬೂರಿನ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.
ಇನ್ನೂ ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Poll (Public Option)

Post a comment
Log in to write reviews