
ಮಂಡ್ಯ :ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಫ್ಲೆಕ್ಸ್ ಗಳನ್ನ ಸುಟ್ಟುಹಾಕಿದ್ದಾರೆ. ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಆಗಸ್ಟ್.08 ರಂದು ಘಟನೆ ನಡೆದಿದೆ.
ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿದ್ದ ಫ್ಲೆಕ್ಸ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರನ್ನ ಸ್ವಾಗತಿಸಲು ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್‌ಗಳಲ್ಲಿ ಪ್ರೀತಂ ಫೋಟೋ ಹಾಕಿದ್ದಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಮತ್ತೊಂದೆಡೆ ಪ್ರೀತಂ ಪರವಾಗಿ ಬೆಂಬಲಿಗರು ಘೋಷಣೆ ಕೂಗಿದ್ದರು. ಇದರಿಂದ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಹೋಗಿತ್ತು. ಇದೀಗ ಮಾಜಿ ಶಾಸಕ ಪ್ರೀತಂ ಭಾವಚಿತ್ರವಿದ್ದ ಫ್ಲೆಕ್ಸ್‌ಗಳಿಗೆ ಬೆಂಕಿ ಇಡಲಾಗಿದೆ.
Poll (Public Option)

Post a comment
Log in to write reviews