2024-12-24 05:53:44

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ; ಇಲ್ಲಿದೆ ವಿವರ

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ಗ್ರಾಮ್​ಗೆ ಒಂದು ರೂನಷ್ಟು ಮಾತ್ರ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡಿದೆ. ಕೆಲವು ಕಡೆ ಬೆಲೆ ಹೆಚ್ಚಳವಾದರೆ ಇನ್ನೂ ಕೆಲವು ಕಡೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 90 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,610 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,030 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,270 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,610 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,010 ರುಪಾಯಿಯಲ್ಲಿ ಇದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 26ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,610 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,030ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 927 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,610 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,030 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 901 ರೂ ಇದೆ.

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ ಎನ್ನಲಾಗಿದೆ.

Post a comment

No Reviews