2024-12-24 06:25:42

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ಲೈಓವರ್ ಕಾಮಗಾರಿ: ತಲೆಗೆ ಕಬ್ಬಿಣದ ರಾಡ್ ಬಿದ್ದು ASIಗೆ ಗಂಭೀರ ಗಾಯ

ಹುಬ್ಬಳ್ಳಿ: ನಗರದ ಹಳೆ ಕೋರ್ಟ್ ಸರ್ಕಲ್ ಬಳಿ ಪ್ಲೈಓವರ್ ಕಾಮಗಾರಿ ಸಂದರ್ಭದಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ತಲೆಗೆ ಬಿದ್ದು ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಎಎಸ್ಐ) ಗಾಯಗೊಂಡ ಘಟನೆ ಮಂಗಳವಾರ ನಡೆದಿದ್ದು, ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಬಿರಾಜ್ ದಾಯಣ್ಣವರ ಅವರಿಗೆ ಗಂಭೀರ ಗಾಯಗಳಾಗಿದ್ದು, ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹೆಚ್ಚು ಸುದ್ದಿಯಲ್ಲಿರುವ ಫ್ಲೈ ಓವರ್ ಕಾಮಗಾರಿಗಳು ಇದೀಗ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಕಂಟಕವಾಗುತ್ತಿದೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಕಾಮಗಾರಿ ಮಾಡುತ್ತಿರುವುದೇ ಇಂಥ ಅವಘಡಗಳಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Post a comment

No Reviews