
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಸರ್ಕಾರ ಆದೇಶಿಸಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುನಿರತ್ನ, ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಶಾಸಕ ಮುನಿರತ್ನ ಅವರನ್ನು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ಮೂಲಕ ಇನ್ನೂ 14 ದಿನ ಶಾಸಕ ಮುನಿರತ್ನಗೆ ಜೈಲೇ ಗತಿಯಾಗಿದೆ.
Poll (Public Option)

Post a comment
Log in to write reviews