
ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ(72) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸುಶೀಲ್ ಮೋದಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಆರೋಗ್ಯದ ದೃಷ್ಟಿಯಿಂದ ಅವರು ರಾಜಕೀಯದಿಂದ ದೂರ ಉಳಿದಿದ್ದರು.ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಫರ್ಧೆಯಿಂದ ಹಿಂದೆ ಸರಿದಿದ್ದರು.
ಸುಶೀಲ್ ಮೋದಿ ಅವರು ಜನವರಿ 5, 1952 ರಂದು ಪಾಟ್ನಾದಲ್ಲಿ ಜನಿಸಿದರು. ಬಿಹಾರದ ಮೂರನೇ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ಪಾಟ್ನಾದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸುಶೀಲ್ ಮೋದಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ ಕುಮಾರ್ ಸೇರಿದಂತೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.
Poll (Public Option)

Post a comment
Log in to write reviews