
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಂದು ಕಾಂಗ್ರೇಸ್ ಸರ್ಕಾರದ ವಿರುದ್ಧ ಬಿಜೆಪಿ ಸರ್ಕಾರ ಶಿವಮೊಗ್ಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದರಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್ ವಿಧಿವಶರಾಗಿದ್ದಾರೆ.
ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕಾರ್ಕಳದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಸೇರಿದಂತೆ ಹಲವರು ಗಣ್ಯರು ಸಂತಾಪ ಸೂಚಿಸಿದ್ದಾರೆ.
Poll (Public Option)

Post a comment
Log in to write reviews