
ಬೆಂಗಳೂರು: ಟೀಂ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್, ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ. 52 ವರ್ಷದ ಡೇವಿಡ್ 1996ರಲ್ಲಿ ಭಾರತದ ಪರವಾಗಿ ಟೆಸ್ಟ್ ಮ್ಯಾಚ್ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳುತ್ತಿದ್ದ ಡೇವಿಡ್ ಜಾನ್ಸನ್ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews