
ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ 41 ವರ್ಷದ ಪ್ರತಾಪ್ ಕುಮಾರ್, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆಂದು ತಿಳಿದುಬಂದಿದೆ. ಇದನ್ನು ಗಮಿಸಿದ ಸ್ಥಳೀಯರು ಕೂಡಲೇ ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ.
Poll (Public Option)

Post a comment
Log in to write reviews