ಮಾಜಿ ಶಾಸಕ ಮೊಯಿದ್ದೀನ್ ಅವರ ಬಾವ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಜನರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಸಹೋದರ ಮುಮ್ತಾಜ್ ಅಲಿ ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ರೂಪಿಸಿದ್ದಾರೆ. ಮುಮ್ತಾಜ್ ಆಲಿ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ರೆಹಮತ್ ಸುಳ್ಳು ಪ್ರಚಾರ ಮಾಡಿ ಬೆದರಿಕೆ ಹಾಕಿದ್ದಾನೆ. 2024ರ ಜುಲೈನಿಂದ ಈವರೆಗೆ ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಮಹಿಳೆ ಚೆಕ್ ಮೂಲಕ ಪಡೆದಿದ್ದಾಳೆ.
ಸತ್ತಾರ್ ಎಂಬಾತ ಮುಮ್ತಾಜ್ ಅಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಮ್ತಾಜ್ ಅಲಿ ಸಹೋದರ ಹೈದರ್ ದೂರು ನೀಡಿದ್ದಾರೆ.
Post a comment
Log in to write reviews