
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂನಲ್ಲಿ ಬಸ್-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಇದೇ ವೇಳೆ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಬಳಿ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
Poll (Public Option)

Post a comment
Log in to write reviews