
ದಕ್ಷಿಣ ಕನ್ನಡ : ನಿರಂತರವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಳ್ಳಾಲದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೃತರನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದ ನಿವಾಸಿಗಳಾದ ಯಾಸೀರ್ (45), ಅವರ ಪತ್ನಿ ಮರಿಯಮ್ಮ (40) ಹಾಗೂ ಇಬ್ಬರು ಮಕ್ಕಳಾದ ರಿಯಾನಾ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ಅಬೂಬ್ಬಕರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದು ಯಾಸೀರ್ ಅವರ ಮನೆಯ ಮೇಲೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ನೆನೆದು ಕುಸಿದು ಬಿದ್ದಿದೆ ಎಂದು ತೀಳಿದುಬಂದಿದೆ .
ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿ ಓರ್ವ ಬಾಲಕಿಯ ಮೃತದೇಹ ಹೊರ ತಗೆಯುವುದಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಆಗುತ್ತಿದೆ. ಮಳೆ ಮಂದುವರೆಯುವ ಮುನ್ಸೂಚನೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
Poll (Public Option)

Post a comment
Log in to write reviews