
ಯಾದಗಿರಿ: ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಹಿನ್ನಲೆ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ಘಟನೆ ನಡೆದಿದೆ. ಇನ್ನು ಮೂರು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿರುವಂತಹ (died) ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ಜಮೀನಿನಲ್ಲಿ ನಡೆದಿದೆ. ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತರು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Poll (Public Option)

Post a comment
Log in to write reviews