ಜಮ್ಮು ಕಾಶ್ಮೀರ: ದೋಡಾದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರ ;ಜೂನ್ 15 (ಮಂಗಳವಾರ) ರಾತ್ರಿ ಉಗ್ರರು ಮತ್ತು ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಒಬ್ಬ ಸೇನಾಧಿಕಾರಿ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದು ಐವರು ಯೋಧರು ಗಂಭೀರ ಗಾಯಗೊಂಡಿರುವ ಘಟನೆ ಕಾಶ್ಮೀರದ ದೊಡ್ಡ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ದೇಸಾ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಮತ್ತು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಶೋಧ ಕಾರ್ಯಾಚರಣೆ ವೇಳೆ ರಾತ್ರಿ ಭಯೋತ್ಪಾದಕರೊಂದಿಗೆ ಎನ್‌ಕೌಂಟರ್ ಶುರುವಾಗಿದೆ. ಆರಂಭದಲ್ಲಿ 20 ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.
ತಕ್ಷಣವೇ ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಇದರಲ್ಲಿ ನಾಲ್ವರು ಯೋಧರು ಕೊನೆಯುಸಿರೆಳೆದಿದ್ದಾರೆ. ಒಬ್ಬ ಯೋಧ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಸೇನಾ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
Poll (Public Option)

Post a comment
Log in to write reviews