ಇನ್ಮುಂದೆ ಶಾಲೆಗಳಲ್ಲಿ ಭರ್ಜರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳುವಂತಿಲ್ಲ: ರಾಜ್ಯ ಸರ್ಕಾರದ ಹೊಸ ಆದೇಶ!
ಬೆಂಗಳೂರು: ಹುಟ್ಟುಹಬ್ಬವಿದೆ ಎಂದು ಶಾಲೆಗಳಿಗೆ ತೆರಳಿ ಹುಟ್ಟು ಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ದೊಡ್ದ ದೊಡ್ದ ಸೆಲೆಬ್ರಿಟಿಗಳು ರಾಜಕೀಯ ಮುಖಂಡರುಗಳು, ಮಠಾದೀಶರು ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಶಾಲೆಗಳಲ್ಲಿ ಆಚರಿಸಿ ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆದ್ದೂರಿಯಾಗಿ ಆಚರಿಸುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿ ಬಂದಿವೆ.
ಶಾಲೆಗೆ ಎಲ್ಲ ವರ್ಗದ ಮಕ್ಕಳೂ ಬರುತ್ತಾರೆ. ಕೆಲವರಿಗೆ ಈ ರೀತಿಯಾಗಿ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ಅವರು ಮನದಲ್ಲಿ ನೊಂದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇಂತಹ ಘಟನೆಗಳು ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ವಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಹಾಗಾಗಿ ಇನ್ಮುಂದೆ ಶಾಲೆಗಳಲ್ಲಿ ಭರ್ಜರಿಯಾಗಿ ಹುಟ್ಟು ಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲೆಯಲ್ಲಿ ಕೇವಲ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಸೂಚನೆ ನೀಡಿದೆ.
Post a comment
Log in to write reviews