2024-12-24 05:50:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಣೇಶ ಮೆರವಣಿಗೆಗೆ ನೋ ಎಂಟ್ರಿ: ಸರ್ಕಾರಕ್ಕೆ ವಿಜಯೇಂದ್ರ ʻಸುತ್ತೋಲೆʼ ಬಾಣ..!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ. ರಾಜ್ಯದಲ್ಲಿ ಹಿಂದೆಂದೂ ಘಟಿಸದ ರೀತಿ ಗಣೇಶ ಉತ್ಸವದ ಮೆರವಣಿಗೆಗಳನ್ನೇ ಗುರಿಯಾಗಿಸಿ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ ಅಂತಾ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಸರಣಿ ಘಟನೆಗಳನ್ನು ಗಮನಿಸಿದರೆ ಹಿಂದೂ ಧಾರ್ಮಿಕ ಆಚಾರ-ವಿಚಾರಗಳನ್ನು ದಮನ ಮಾಡಲು ಈ ರಾಜ್ಯದಲ್ಲಿ ಒಂದು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿರುವಂತೆ ಕಾಣುತ್ತಿದೆ.ಕಣ್ಣು, ಕಿವಿ ಇವೆರಡನ್ನೂ ಮುಚ್ಚಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ, ಕಿಡಿಗೇಡಿಗಳ ವ್ಯೂಹವನ್ನು ಭೇದಿಸಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಗಮನ ನೀಡುವ ಬದಲು, ಧಾರ್ಮಿಕ ಶ್ರದ್ಧೆಯ ಗಣೇಶೋತ್ಸವದ ಮೆರವಣಿಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡು ಎಂದು ಸರ್ಕಾದ ವಿರುದ್ಧ ವಿಜಯೇಂದ್ರ ಹರಿಹಾಯ್ದಿದ್ದಾರೆ.

ಎಷ್ಟರ ಮಟ್ಟಿಗೆ ಪೊಲೀಸ್ ವ್ಯವಸ್ಥೆ ಪಕ್ಷಪಾತಿ ಹಾಗೂ ನಿಷ್ಕ್ರಿಯವಾಗಿದೆ ಎಂದರೆ.. ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ನಿರ್ಬಂಧಿಸುವ ಹೇಡಿತನವನ್ನು ಪ್ರದರ್ಶಿಸಿದ್ದಾರೆ.

ವಿದ್ಯೆಗೆ ಅಧಿಪತಿ ಗಣಪತಿ, ವಿದ್ಯೆ ದಯಪಾಲಿಸುವ ಗಣೇಶನನ್ನು ಶಾಲಾ-ಕಾಲೇಜುಗಳಲ್ಲಿ ಪೂಜಿಸುವುದು, ಮೆರವಣಿಗೆ ನಡೆಸುವುದು ಶತಮಾನಗಳಿಂದ ನಡೆದು ಬಂದಿರುವ ಪ್ರತೀತಿ. ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆ ಶೈಕ್ಷಣಿಕ ಶ್ರದ್ಧೆಯನ್ನು ವಿಚಲಿತಗೊಳಿಸಲು ಯತ್ನಿಸುವ ಕ್ರಮ ಇದಾಗಿದೆ ಅಂತಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಸರ್ಕಾರವನ್ನು ತಿವಿದಿದ್ದಾರೆ. 

ಒಂದು ಕಡೆ ಧಾರ್ಮಿಕ ಆಚರಣೆಯಲ್ಲಿ ತೊಡಗುವವರಿಗೆ ರಕ್ಷಣೆ ನೀಡಲಾಗದೆ, ಮತ್ತೊಂದು ಕಡೆ ಹಿಂದೂ ವಿರೋಧಿ ದುಷ್ಕರ್ಮಿಗಳ ಷಡ್ಯಂತ್ರವನ್ನು ಪರೋಕ್ಷವಾಗಿ ಬೆಂಬಲಿಸುವಂತೆ ಪೊಲೀಸ್ ವ್ಯವಸ್ಥೆ ನಡೆದುಕೊಳ್ಳುತ್ತಿದೆ. ಈ ನಡವಳಿಕೆಯನ್ನು ನಾವು ಸಹಿಸಿಕೊಳ್ಳುತ್ತಿದ್ದೇವೆ ಎಂದರೆ, ಅದು ನಮ್ಮ ದೌರ್ಬಲ್ಯವಲ್ಲ ಎಂಬ ಅಂಶ ಸರ್ಕಾರದ ವ್ಯವಸ್ಥೆಗೆ ತಿಳಿದಿರಲಿ. ತಾಳ್ಮೆ, ಸಂಯಮ ನಮ್ಮ ಸಂಸ್ಕಾರ ಹೌದು, ಅಂತೆಯೇ ದಬ್ಬಾಳಿಕೆಯನ್ನು ಹಿಮ್ಮೆಟ್ಟಿಸುವುದು ನಮ್ಮ ಸ್ವಾಭಿಮಾನದ ಸಂಕೇತವೂ ಹೌದು ಎಂಬುದು ಈ ಸರ್ಕಾರಕ್ಕೆ ತಿಳಿದಿರಲಿ ಅಂತಾ ಚುಚ್ಚಿದ್ದಾರೆ.

ಮುಗ್ಧ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪರೋಕ್ಷವಾಗಿ ದ್ವೇಷದ ಭಾವನೆ ಬಿತ್ತುವ ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರು ಹೊರಡಿಸಿರುವ ಸುತ್ತೋಲೆ, ಶಾಂತಿ ಮೂಡಿಸುವ ಬದಲಾಗಿ ವಿದ್ಯಾರ್ಥಿಗಳ ಸಂಯಮಕ್ಕೆ ಭಂಗ ತರುತ್ತದೆ. ಅಸಹನೆಯನ್ನು ಹುಟ್ಟು ಹಾಕುತ್ತದೆ ಎಂಬ ವಿವೇಚನೆ ವಿ.ವಿ.ಯ ಆಡಳಿತ ಬಳಸದಿರುವುದು ವಿಪರ್ಯಾಸ ಎಂದು ವಿಜಯೇಂದ್ರ ಜರಿದಿದ್ದಾರೆ.

ಈ ಕೂಡಲೇ ವಿಶ್ವವಿದ್ಯಾಲಯವು ಸುತ್ತೋಲೆಯನ್ನು ವಾಪಸ್ ತೆಗೆದುಕೊಳ್ಳಲಿ. ಸ್ವಇಚ್ಛೆ ಹಾಗೂ ಧಾರ್ಮಿಕ ಶ್ರದ್ಧೆಯಿಂದ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸುವುದನ್ನು ತಡೆಯುವ ಪ್ರಯತ್ನವನ್ನು ಕೂಡಲೇ ನಿಲ್ಲಿಸಲಿ ಎಂದು ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ  ಕೆಂಡ ಕಾರಿದ್ದಾರೆ. 

Post a comment

No Reviews