
ಉಡುಪಿ-ಮಣಿಪಾಲ್ ನಡು ರಸ್ತೆಯಲ್ಲಿ ನಡೆದ ಗ್ಯಾಂಗ್ ವಾರ್ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 18ರಂದು ಈ ಗ್ಯಾಂಗ್ ವಾರ್ ನಡೆದಿತ್ತು. ಇದನ್ನು ಅಪರಿಚಿತರೊಬ್ಬರು ವಿಡಿಯೋ ಮಾಡಿಕೊಂಡಿದ್ದರು. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬುವವರನ್ನು ಬಂಧಿಸಲಾಗಿದೆ. ಈ ಗ್ಯಾಂಗ್ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದು, ಕೃತ್ಯಕ್ಕೆ ಬಳಸಿಕೊಂಡಿರುವ ಎರಡು ಸ್ವಿಫ್ಟ್ ಕಾರು, ಎರಡು ಬೈಕ್ ಮತ್ತು ಮಾರಕಾಸ್ತ್ರಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Poll (Public Option)

Post a comment
Log in to write reviews