
ಬೆಂಗಳೂರು : ಚಂದನವನದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗ ಸಮರ್ಜೀತ್ ಲಂಕೇಶ್ ನಟನೆಯ ಗೌರಿ ಚಿತ್ರವು ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ.
ಚಿತ್ರ ತಂಡವು ಪತ್ರಿಕಾ ಗೋಷ್ಠಿ ಹಮ್ಮಿಕೊಂಡು ಚಿತ್ರದ ರಿಲೀಸ್ ಡೇಟ್ ಅನ್ನು ಘೊಷಿಸಿದೆ. ಇಗಾಗಲೇ ಚಿತ್ರತಂಡ ಕೆಲವು ಹಾಡುಗಳನ್ನು ಹಾಗೂ ಟ್ರೇಲರ್ ರಿಲೀಸ್ ಮಾಡುವ ಮೂಲಕ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಈ ಸಿನಿಮಾಗೆ ಇಂದ್ರಜೀತ್ ಲಂಕೇಶ್ ರ ನಿರ್ದೇಶನವಿದ್ದು, ಅವರ ಪುತ್ರ ಸಮರ್ಜಿತ್ ಲಂಕೇಶ್ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಹಾಗೆಯೇ ಈ ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ಸಾನ್ಯ ಐಯ್ಯರ್ ನಾಯಕಿಯಾಗಿದ್ದಾರೆ.
ಡೇಟ್ ಅನೌನ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ‘ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದಾಗಿದ್ದು, ಎಲ್ಲಾ ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ ಎಂದರು. ಗೌರಿ ಸಿನಿಮಾ ನನ್ನ ಹಲವು ದಿನಗಳ ಕನಸನ್ನು ನನಸಾಗಿಸುವಲ್ಲಿ ಯಶಸ್ವಿಯಾಗಲಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.
Poll (Public Option)

Post a comment
Log in to write reviews