
ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ನೇಮಕ ಪೂರ್ಣಗೊಂಡಿದ್ದು, ಈ ತಿಂಗಳ ಕೊನೆಯಲ್ಲಿ ಬಿಸಿಸಿಐ ಅಧಿಕೃತ ಘೋಷಣೆ ಮಾಡಲಿದ್ದು, ಟಿ20 ವಿಶ್ವಕಪ್ ಬಳಿಕ ಗಂಭೀರ್ ನೇಮಕದ ಕುರಿತು ಪ್ರಕಟಣೆ ಹೊರಬೀಳಲಿದೆ ಎನ್ನಲಾಗಿದೆ.
ಟೀಂ ಇಂಡಿಯಾ ಅಮೆರಿಕ ಮತ್ತು ವೆಸ್ಟ್ ಇಂಡೀಸ್’ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರಲ್ಲಿ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಪಂದ್ಯಾವಳಿಯ ಅಂತಿಮ ಪಂದ್ಯ ಜೂನ್ 29 ರಂದು ನಡೆಯಲಿದೆ.
ಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್‌ಗಾಗಿ ಹುಡುಕಾಟ ಆರಂಭಿಸಿತ್ತು. ಮಾಜಿ ಆರಂಭಿಕ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
Poll (Public Option)

Post a comment
Log in to write reviews