
ಶಾಲೆಗೆ ಹೋಗಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟ ಹೃದಯವಿದ್ರಾವಕ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಬಾಲಕಿ ಇಂದು ಬೆಳಗ್ಗೆ ಶಾಲೆಗೆ ಹೋಗಿದ್ದಳು ಗ್ರಾಮದಲ್ಲಿ ಮಳೆ ಬಂದಿರೋ ಹಿನ್ನೆಲೆ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಅದನ್ನು ಗಮನಿಸದ ಬಾಲಕಿ ವಿದ್ಯುತ್ ಕಂಬ ಸ್ಪರ್ಶಿಸಿದ್ದರಿಂದ ಶಾಕ್ ಹೊಡೆದಿದೆ. ಇದರಿಂದಾಗಿ ಕೆಲವೇ ಸಮಯದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಕಾನಾಹೊಸಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
Poll (Public Option)

Post a comment
Log in to write reviews