
ತುಮಕೂರು: 5ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ.
ಸಂಜೆ 5 ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಹುಚ್ಚುನಾಯಿಯೊಂದು ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಕಚ್ಚಿರುವ ಹುಚ್ಚುನಾಯಿ, ಸಾಕು ನಾಯಿಗಳ ಮೇಲೂ ದಾಳಿ ಮಾಡಿದೆ. ಈ ಹುಚ್ಚು ನಾಯಿಯಿಂದ ಕಡಿತಗೊಳಗಾದ ನಾಯಿಗಳಿಗೂ ಹುಚ್ಚು ಹರಡುವ ಸಂಭವ ಇರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜಾ, ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದರು. ಪಾಲಿಕೆ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
Poll (Public Option)

Post a comment
Log in to write reviews