
ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಚಂದ್ರಶೇಖರ ಸ್ವಾಮೀಜಿ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ ಭಾಗವಹಿಸಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ವೇದಿಕೆ ಮೇಲೆಯೇ ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಮುಖ್ಯಮಂತ್ರಿಯಾಗಿ ಅನುಭವ ಇದೆ, ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಈಗ ಸಿಎಂ ಸ್ಥಾನ ಬಿಟ್ಟುಕೊಟ್ಟು ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಿ ಮನವಿ ಮಾಡಿಕೊಂಡರು.
Poll (Public Option)

Post a comment
Log in to write reviews