2024-09-19 04:59:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್

ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿದೆ. ಆಫೀಸ್ ಅಸಿಸ್ಟೆಂಟ್ ಆಫೀಸರ್ ನೇಮಕಾತಿಗೆ ಸಂಬಂಧಿಸಿದಂತೆ 556 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಹುದಾಗಿದೆ.

ಹುದ್ದೆಯ ವಿವರ:
ಕರ್ನಾಟಕ ಗ್ರಾಮೀಣ ಬ್ಯಾಂಕ್-386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್-200, ಆಫೀಸ್ ಅಸಿಸ್ಟೆಂಟ್-200
ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್)-386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಹತೆ ಏನು?
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ:
ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

Post a comment

No Reviews