
ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚೆನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತುರ್ತು ಸ್ಪಂದನೆ ಮಾಡಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಹಲವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಾತ್ರೆ ಇದ್ದಿದ್ದರಿಂದ ಬೆಟ್ಟದ ಮೇಲಿಂದ ನೀರು ತಂದು ತಂಬಿಟ್ಟು ಮಾಡಲಾಗಿತ್ತು. ಅದನ್ನು ಸೇವಿಸಿದ ಬಳಿಕ ಅನಾರೋಗ್ಯ ಕಾಣಿಸಿಕೊಂಡಿದ್ದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಅದೇನಿದ್ದರೂ ಪರಿಶೀಲನೆ ನಂತರ ತಿಳಿಯುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
Poll (Public Option)

Post a comment
Log in to write reviews