ಕೋವಿಡ್ ಸಂದರ್ಭದಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸ ಮಾಡಲಿಲ್ಲ: ಎಂ.ಬಿ ಪಾಟೀಲ್
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸ ಮಾಡಬೇಕಿತ್ತು. ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿಮಾಡಿದ್ದಾರೆ. ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ನಾನು ಇದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ಕಳಪೆ ಮಟ್ಟದ ಉಪಕರಣಗಳ ಬಳಕೆ ಮಾಡಿದ್ದಾರೆ. ಕೆಲಸ ಮಾಡಬೇಕು ನಿಜ, ಲೂಟಿ ಹೊಡೆಯಬೇಕು ಎಂದಿಲ್ಲ ಆದರೆ ಸಾವು-ಬದುಕಿನ ಸಂದರ್ಭದಲ್ಲಿ ಲೂಟಿ ಹೊಡೆದಿದ್ದಾರೆ ಎಂದರು.
ಸರ್ಕಾರ ಫಿಕ್ಸ್ ಮಾಡಿದ ಹಣಕ್ಕಿಂತ ನಮ್ಮ ಮೆಡಿಕಲ್ ಆಸ್ಪತ್ರೆಯಲ್ಲಿ ಕಡಿಮೆ ಬೆಲೆಗೆ ಮಾಡಿದ್ದೀವಿ. ನಾವು ಒಂದು ಸಾವಿರಕ್ಕೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ತಗೋತಿದ್ವಿ. ಆದರೆ ಸರ್ಕಾರ ಕಳಪೆ ಮಟ್ಟದ 150 ರೂ. ದನ್ನು ನಾಲ್ಕು ಪಟ್ಟು ಜಾಸ್ತಿ ದುಡ್ಡು ಕೊಟ್ಟು ಪಿಪಿಇ ಕಿಟ್‌ಗಳನ್ನು ಖರೀದಿ ಮಾಡಿದ್ದಾರೆ. ಕೊರೊನಾದಲ್ಲಿ ಮಾನವೀಯತೆ ಮೆರೆಯಬೇಕಿತ್ತು ಆದರೆ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಹಗರಣವನ್ನೇ ಮಾಡಿದ್ದಾರೆ ಎಂದು ಕಿಡಿಕಾರಿದರು.
Post a comment
Log in to write reviews