
ಯಾದಗಿರಿ: ಸರ್ಕಾರಿ ಆಸ್ಪತ್ರೆ ವೈದ್ಯರ ಯಡವಟ್ಟಿಗೆ ಬಾಣಂತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರಿನ ತಾಲೂಕಾ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವತಿಯನ್ನು ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಭವಾನಿ ಎಂದು ಗುರುತಿಸಲಾಗಿದೆ.
ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡ ಹೋಗಿದ್ದರು. ಆಸ್ಪತ್ರೆಯ ವೈದ್ಯೆ ಸರೋಜಾ ಪಾಟೀಲ ರಕ್ತ ತಪಾಸಣೆಗೆ ಕೊಟ್ಟಿದ್ದು, ವರದಿ ಬರುವ ಮುನ್ನವೇ ಸಿಜೆರಿಯನ್ ಮಾಡುವ ಮೂಲಕ ಹೆರಿಗೆ ಮಾಡಿದ್ದಾರೆ. ಬಳಿಕ ಬ್ಲಡ್ ರಿಪೋರ್ಟ್ ಬಂದಿದ್ದು, ಬಾಣಂತಿಗೆ ಕಾಮಾಲೆ ಇರುವುದು ಪತ್ತೆಯಾಗಿದೆ. ಇದರಿಂದ ಹೆರಿಗೆಯಾದ ಒಂದು ಗಂಟೆ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ ಅಸ್ವಸ್ಥಳಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews