1,563 ನೀಟ್ ಅಭ್ಯರ್ಥಿಗಳ ಗ್ರೇಸ್ ಅಂಕಗಳು ರದ್ದು: ಜೂ.23ಕ್ಕೆ ಮರು ಪರೀಕ್ಷೆ
ದೆಹಲಿ: NEET-UG 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಅಲ್ಲದೇ ಅಭ್ಯರ್ಥಿಗಳಿಗೆ ಜೂನ್ 23 ರಂದು ಮರು ಪರೀಕ್ಷೆಗೆ ಹಾಜರಾಗುವ ಆಯ್ಕೆಯನ್ನು ನೀಡಿದೆ. ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳ ವಿಚಾರಣೆ ಇಂದು ನಡೆಯಿತು. ನೀಟ್ ಪರೀಕ್ಷೆ ನಡೆಸುವ ಸಂಸ್ಥೆಯಾಗಿರುವ ಎನ್ಟಿಎ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಗ್ರೇಸ್ ಮಾರ್ಕ್ಗಳ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡನೆ ನಡೆಯಿತು.
ಪರೀಕ್ಷೆಯ ರದ್ದತಿ ಹಾಗೂ ಮರು ಪರೀಕ್ಷೆ ಕುರಿತು ಸುಪ್ರೀಂ ವಿಚಾರಣೆ ನಡೆಸಿದ್ದು ಅಂತಿಮವಾಗಿ ಎನ್ಟಿಎ ನೀಡಿರುವ ಗ್ರೇಸ್ ಅಂಕಗಳನ್ನು ರದ್ದುಗೊಳಿಸಿ, ಜೂನ್ 23ಕ್ಕೆ ಮರುಪರೀಕ್ಷೆ ನಿರ್ಧಾರ ಕೈಗೊಳ್ಳಲಾಯಿತು.
Post a comment
Log in to write reviews