
ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ, ಷಡ್ಯಂತ್ರ ಮಾಡಿ ಹೆಚ್.ಡಿ ರೇವಣ್ಣರನ್ನ ಜೈಲಿಗೆ ಕಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಷಡ್ಯಂತ್ರ ಮಾಡಿ ರೇವಣ್ಣರನ್ನ ಜೈಲಿಗೆ ಕಳುಹಿಸಿದ್ದಾರೆ. ಎಸ್ ಐಟಿ ಸರ್ಕಾರದ ಆದೇಶದಂತೆ ಕೆಲಸ ಮಾಡುತ್ತಿದೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಕೊಡಲು ನಿರ್ಧಾರ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗುವುದಿಲ್ಲ. ಪ್ರಧಾನಿ ಮೋದಿ ಮೈತ್ರಿ ಪಕ್ಷಗಳನ್ನ ಕೈ ಬಿಡುವುದಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
Tags:
Poll (Public Option)

Post a comment
Log in to write reviews