
ಅಮೆರಿಕ: ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ನಿಧಿ ಸಂಗ್ರಹಣೆ ಮತ್ತು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿದ್ದು, ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕಮಲಾ ಅವರು ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದು ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.ಅರಿಜೋನಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿ ಮೇಲೆ ಗುಂಡು ಹಾರಿಸಲಾಯಿತು.
Poll (Public Option)

Post a comment
Log in to write reviews