ಕರ್ನಾಟಕ
ಮಂತ್ರಾಲಯದಲ್ಲಿ ಗುರು ರಾಯರ ಮಧ್ಯಾರಾಧನೆ ಸಂಭ್ರಮ: ಶೀ ಮಠಕ್ಕೆ ಹರಿದು ಬಂದ ಭಕ್ತ ಸಾಗರ

ರಾಯಚೂರು: ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಯರ ಮಧ್ಯಾರಾಧನೆ ಸಂಭ್ರಮ ಮನೆ ಮಾಡಿದೆ.
ಗುರು ರಾಯರು ವೃಂದಾವನಸ್ಥರಾಗಿ ಇಂದಿಗೆ 353 ವರ್ಷ ತುಂಬಿದೆ. ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತರ ದಂಡು ಹರಿದು ಬರ್ತಿದೆ.
ವೃಂದಾವನಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ವಿಶೇಷ ಮಹಾಪಂಚಾಮೃತ ಅಭಿಷೇಕ ಮಾಡಿದರು. ಸ್ವರ್ಣ ಕವಚ ರಾಯರ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮಠದ ಪ್ರಾಕಾರದಲ್ಲಿ ಗಜ, ರಜತ, ಚಿನ್ನದ ರಥೋತ್ಸವ ನಡೆಸಲಾಯಿತು.
ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿ ಕಣ್ಣು ತುಂಬಿಕೊಂಡರು
Poll (Public Option)

Post a comment
Log in to write reviews