
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು( ಸೋಮವಾರ ಜೂನ್ 15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಕಚೇರಿಗೆ ಭೇಟಿ ನೀಡಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews