
ಬೆಂಗಳೂರು: ʻಹಮಾರೆ ಬಾರಾʼ ಸಿನಿಮಾ ರಾಜ್ಯದಲ್ಲಿ ನಿಷೇಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನ ಎಂದು ವಿಪಕ್ಷನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಸಿನಿಮಾ ಕರ್ನಾಟಕದಲ್ಲಿ ನಿಷೇಧ ಮಾಡುವುದರಿಂದ ಯಾರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ದೇಶದಾದ್ಯಂತ ತೆರೆ ಕಾಣುತ್ತಿರುವ ಈ ಸಿನಿಮಾದಿಂದ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಇಲ್ಲ. ನಾಗರಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಬದಲು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮೂಲಭೂತವಾದಿಗಳ ಜೊತೆ ನಿಲ್ಲಲು ಆಯ್ಕೆ ಮಾಡಿದ್ದಾರೆ. ಹಾಗೆಯೇ ಇದು ಕಾಂಗ್ರೆಸ್ ಮಾಡುತ್ತಿರುವ ವೋಟ್ ಬ್ಯಾಂಕ್ ರಾಜಕೀಯ ಮತ್ತು ಅಸಹಿಷ್ಣುತೆಗೆ ನಾಚಿಕೆಯಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆದಿದ್ದಾರೆ.
Poll (Public Option)

Post a comment
Log in to write reviews