
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅದ್ದೂರಿ ದಸರಾಕ್ಕೆ ಮೈಸೂರಿನಲ್ಲಿ ಭರ್ಜರಿ ತಯಾರಿ ಆರಂಭವಾಗಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ. ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅ.12ರಂದು ಸಮಾರೋಪಗೊಳ್ಳಲಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದ ಆವಣರದಲ್ಲಿ ಬೆಳಗ್ಗೆ 9.15 ರಿಂದ 9.45ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
Poll (Public Option)

Post a comment
Log in to write reviews