
ಬೆಂಗಳೂರು : ನಟಿ ಶಿಲ್ಪಾ ಶೆಟ್ಟಿ ಅವರು ಇಂದು (ಜೂನ್ 8) 49ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 1993 ರಲ್ಲಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಚೊಚ್ಚಲ ಸಿನಿಮಾ ನಟನೆಗೆ ಫಿಲಂಫೇರ್ ಪ್ರಶಸ್ತಿ ಪಡೆದಿದ್ದರು. ಹಿಂದಿ ,ಕನ್ನಡ, ತೆಲುಗು, ತಮಿಳು, ಸಿನಿಮಾಗಳಲ್ಲಿ ನಟಿಸಿರುವ ಶಿಲ್ಪ ಶೆಟ್ಟಿ 55 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಅಭಿಮಾನಿಗಳು ಹಾಗೂ ಆಪ್ತರ ವಲಯದಿಂದ ಶುಭಾಶಯ ಹರಿದು ಬರುತ್ತಿದೆ. ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಸಿನಿಮಾ ರಂಗದ ಸ್ನೇಹಿತರು ಕೂಡ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.
Poll (Public Option)

Post a comment
Log in to write reviews