
ಕೊಡಗು: ಚಂದನವನದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ. ಪೋಷಕರಾಗ್ತಿರೋ ಸುದ್ದಿಯನ್ನ ಹರ್ಷಿಕಾ-ಭುವನ್ ವಿಭಿನ್ನವಾಗಿ ಅನೌನ್ಸ್ ಮಾಡಿದ್ದಾರೆ. ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.
2023 ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ್ದಾರೆ.
ಅವರು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರೆಗ್ನೆನ್ಸಿ ಶೂಟ್ ಅಂದ ತಕ್ಷಣ ಎಲ್ಲರೂ ಹೊಸ ಹೊಸ ಕಾನ್ಸೆಪ್ಟ್ ನಲ್ಲಿ ಶೂಟ್ ಮಾಡಲು ಇಷ್ಟ ಪಡ್ತಾರೆ. ಆದರೆ ಹರ್ಷಿಕಾ ಮತ್ತು ಭುವನ್ ಮಾತ್ರ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯವನ್ನ ಬಿಟ್ಟು ಕೊಡಬಾರದು ಅನ್ನೋ ಹಿನ್ನಲೆಯಲ್ಲಿ ಅದರದ್ದೆ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡುವ ಮೂಲಕ ಖುಷಿಯ ವಿಚಾರವನ್ನ ಹಂಚಿಕೊಂಡಿದ್ದಾರೆ.
ತಮ್ಮ ಚೊಚ್ಚಲ ಮಗುವಿನ ಆಗಮನದ ವಿಚಾರ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ, ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಸಿಹಿ ಸುದ್ದಿಯನ್ನ ರಾಜ್ಯದ ಜನತೆಗೆ ಹಾಗೂ ಅಭಿಮಾನಿಗಳಿಗೆ ತಿಳಿಸಿದೆ ಈ ಜೋಡಿ.
ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಪುಟ್ಟ ಜೀವದ ಮೇಲೂ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಿದ್ದಾರೆ.
Poll (Public Option)

Post a comment
Log in to write reviews