
ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆ ಕೇಸ್ ದಾಖಲಾಗಿದೆ. ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಭಾಷಣ ಮಾಡುತ್ತಾ ‘ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಹೇಳಿಕೆ ನೀಡಿದರು.
Poll (Public Option)

Post a comment
Log in to write reviews