
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು ನೀಡಿದೆ. ಶಾಸಕರು ಹಾಗೂ ಪರಿಷತ್ ಸದಸ್ಯರು, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ಚಂದ್ರಶೇಖರ್ ವಿರುದ್ಧ ಸಿಎಸ್ಗೆ ದೂರು ನೀಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಸಿಎಸ್ಗೆ ಜೆಡಿಎಸ್ ನಿಯೋಗ ಮನವಿ ಮಾಡಿದೆ.
ಇತ್ತ ಕರ್ನಾಟಕ ಬಿಜೆಪಿ ಕೂಡ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ.
Poll (Public Option)

Post a comment
Log in to write reviews