
ಹಾಸನ : ಹಾಸನದ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಮಾಜಿಸಚಿವ ಎಚ್.ಡಿ.ರೇವಣ್ಣ ಜಾರಿ ಬಿದ್ದಿದ್ದಾರೆ. ಘಟನೆಯ ಪರಿಣಾಮ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟು ಬಿದ್ದಿದೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ, ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.
ಇನ್ನು ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣರನ್ನು ತಕ್ಷಣ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚ್.ಡಿ.ರೇವಣ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Poll (Public Option)

Post a comment
Log in to write reviews