
ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ ಇಂದು (ಭಾನುವಾರ ಜೂನ್ 16) ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿಗೆ ಆದಿಚುಂಚನಗಿರಿ ಆಗಮಿಸಿದ್ದು ಕಾಲಭೈರವೇಶ್ವರನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠಕ್ಕೆ ತೆರಳಿದ ಅವರು ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಸಚಿವ ಪುಟ್ಟರಾಜು, ಮಾಜಿ ಶಾಸಕ ಸುರೇಶ್‌ಗೌಡ ಹಾಗೂ ಜೆಡಿಎಸ್ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews