
ನವದೆಹಲಿ: ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಮೇಲೆ ಎಚ್.ಡಿ.ಕುಮಾರಸ್ವಾಮಿ ಮೊದಲ ಕಡತಕ್ಕೆ ಬುಧವಾರ (ಜೂನ್ 12) ಸಹಿ ಹಾಕಿದ್ದಾರೆ. ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ ಸೇರಿದಂತೆ ಇತರ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಸಹಿ ಹಾಕಿ ನಂತರ ಹಣಕಾಸು ಇಲಾಖೆಯ ಅನುಮೋದನೆಗೆ ಕಳುಹಿಸಲಾಗಿದೆ. ಇದು ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆಗೆ ಸಂಬಂಧಿಸಿದ ಕಡಿತವಾಗಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ , ಕುದುರೆಮುಖ ಕಬ್ಬಿಣ ಅದಿರು ಕಂಪನಿ ಈ ಯೋಜನೆ ಒಳಗೊಂಡಿದ್ದು ಈ ಕಡತ ಹಲವು ದಿನಗಳಿಂದ ಬಾಕಿ ಉಳಿದಿತ್ತು ಎನ್ನಲಾಗಿದೆ.
Poll (Public Option)

Post a comment
Log in to write reviews