
ಬೆಂಗಳೂರು: ಡಿನೋಟಿಫಿಕೇಷನ್, ಗಣಿಗಾರಿಕೆಗೆ ಅನುಮತಿ ಪ್ರಕರಣಗಳಲ್ಲಿ ಕಾನೂನು ಸಮರ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿದೆ.
ಜೆಡಿಎಸ್ ಮುಖಂಡ ರಮೇಶ್ ಗೌಡ ನಮ್ಮ ಮನೆಗೆ ಬಂದಿದ್ದರು. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದಿದ್ದರು. ಅದೇ ವೇಳೆ, ಹೆಚ್ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ್ಮ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು ಎಂದು ಆರೋಪ ಮಾಡಿದ್ದಾರೆ.
Poll (Public Option)

Post a comment
Log in to write reviews