ಕರ್ನಾಟಕ
ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 1 ಕೋಟಿ 8 ಲಕ್ಷ ವಂಚಿಸುತ್ತಿದ್ದ.!

ಬೆಳಗಾವಿ: ನೀಟ್ ಪರೀಕ್ಷೆ ಬರೆದು ಕಡಿಮೆ ಅಂಕ ಪಡೆದುಕೊಂಡ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ 10 ಜನರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 1 ಕೋಟಿ 8 ಲಕ್ಷ ರೂ. ವಂಚಿಸುತ್ತಿದ್ದ ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ ಅರವಿಂದ್ ಅರಗೊಂಡ ಬಂಧಿತ ವ್ಯಕ್ತಿ. ಎಂಬಿಎ ಪದವೀಧರನ್ನಾಗಿದ್ದು ಜನರಿಗೆ ವಂಚನೆ ಮಾಡುವುದನ್ನ ವೃತ್ತಿ ಮಾಡಿಕೊಂಡಿದ್ದ. ನಗರದಲ್ಲೇ 10 ಜನರಿಗೆ ಮೋಸ ಮಾಡಿದ್ದು 1 ಕೋಟಿ 8 ಲಕ್ಷ ರೂ. ವಂಚಿಸಿದ್ದಾನೆ. ಬೆಳಗಾವಿ ಮೂಲದ ಓರ್ವ ವಿದ್ಯಾರ್ಥಿ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಖೆಡ್ಡಾಗೆ ಬೀಳಿಸಲಾಗಿದೆ. ಬಂಧಿತ ಆರೋಪಿಯಿಂದ 12 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 12 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ.
Poll (Public Option)

Post a comment
Log in to write reviews