
ಸಿಕ್ಕಿಂ: ಮಂಗನ್ ಜಿಲ್ಲೆಯಲ್ಲಿ ಭಾರೀ ಮಳೆಯ ಪ್ರವಾಹಕ್ಕೆ ಆರು ಜನರು ಸಾವನ್ನಪ್ಪಿದ್ದು, 1,200 ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಬೇರೆ ರಾಜ್ಯಗಳ ಸುಮಾರು 1,200ಕ್ಕೂ ಅಧಿಕ ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಮಂಗನ್ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಹೇಳಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ಬಿ ಪಾಠಕ್ ಅವರು ಸಿಲುಕಿರುವ ಪ್ರವಾಸಿಗರನ್ನು ವಿಮಾನದಲ್ಲಿ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಕೇಂದ್ರದೊಂದಿಗೆ ಚರ್ಚಿಸಿದರು. ಮಳೆ ಮುಂದುವರಿದರೆ, ನಾವು ಸರಕುಗಳನ್ನು ರಸ್ತೆ ಮಾರ್ಗದ ಮೂಲಕ ಸಾಗಿಸಲು ಪ್ರಯತ್ನಿಸುತ್ತೇವೆ. ಪ್ರವಾಹದಿಂದ ರಸ್ತೆಗಳು ಹಾಳಾಗಿದ್ದು, ಸಂಪರ್ಕವನ್ನು ಮರುಸ್ಥಾಪಿಸಲು ಒಂದು ವಾರ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Poll (Public Option)

Post a comment
Log in to write reviews